Ad imageAd image

ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆ: ಅಧಿಕಾರಿಗಳ ಗೈರಿಗೆ ತಹಶೀಲ್ದಾರ್ ಗರಂ

ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಶುಕ್ರವಾರ ಚನ್ನಮ್ಮ ಜಯಂತಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆ ಕರೆಯಲಾಗಿತ್ತು.

Nagesh Talawar
ಚನ್ನಮ್ಮ ಜಯಂತಿ ಪೂರ್ವಭಾವಿ ಸಭೆ: ಅಧಿಕಾರಿಗಳ ಗೈರಿಗೆ ತಹಶೀಲ್ದಾರ್ ಗರಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಶುಕ್ರವಾರ ಚನ್ನಮ್ಮ ಜಯಂತಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಇದರಲ್ಲಿ ಬಹುತೇಕ ಇಲಾಖೆಯ ಅಧಿಕಾರಿಗಳು ಭಾಗವಹಿಸದೆ ಗೈರಾಗಿದ್ದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹಾಗೂ ಪಂಚಮಸಾಲಿ ಸಮಾಜದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಮುಂದೆ ಪೂರ್ವಭಾವಿ ಸಭೆ ನಡೆಸಬೇಕಾ ಬೇಡವಾ? ಬರದೆ ಇದ್ದರೆ ಯಾಕೆ ಬರುವುದಿಲ್ಲ ಎಂದು ಅಧಿಕಾರಿಗಳು ಲಿಖಿತ ರೂಪದಲ್ಲಿ ತಿಳಿಸಬೇಕು ಎಂದು ತಹಶೀಲ್ದಾರ್ ಖಡಕ್ ಎಚ್ಚರಿಕೆ ನೀಡಿದರು.

ಸರ್ಕಾರಿ ನಿಯಮದಂತೆ ಕಚೇರಿಯಲ್ಲಿ ಜಯಂತಿ ಆಚರಿಸುತ್ತೇವೆ. ಅಧಿಕಾರಿಗಳು, ಸಮಾಜದ ಮುಖಂಡರು ಭಾಗವಹಿಸಬೇಕು. ವಿಶೇಷ ಉಪನ್ಯಾಸ ನಡೆಸಲಾಗುವುದು ಎಂದು ತಿಳಿಸಿದರು. ಇದಕ್ಕೂ ಮೊದಲು ಚನ್ನಮ್ಮ ವೃತ್ತದಿಂದ ಸಮಾಜದ ಬಂಧುಗಳು ಸೇರಿದಂತೆ ಸರ್ವಸಮಾಜದ ಮುಖಂಡರು, ಜನತೆಯೊಂದಿಗೆ ಪೂಜೆ ಸಲ್ಲಿಸಿ ಕಚೇರಿಗೆ ಆಗಮಿಸಲಾಗುವುದು ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ ಹಂಗರಗಿ ತಿಳಿಸಿದರು. ನಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು.

ಈ ವೇಳೆ ಸಮಾಜದ ಮುಖಂಡರಾದ ವಿ.ಬಿ ಕುರುಡೆ, ಸೋಮನಗೌಡ ಬಿರಾದಾರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಆನಂದ ಶಾಬಾದಿ, ಬಿ.ಜಿ ನೆಲ್ಲಗಿ, ಎಸ್.ಬಿ ಪಾಟೀಲ, ಎಸ್.ಬಿ ದೊಡಮನಿ, ಬಸವರಾಜ ಐರೊಡಗಿ, ಶ್ರೀಶೈಲ ಯಳಮೇಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ತಾಲೂಕು ಆಡಳಿತ ಕಚೇರಿ ಸಿಬ್ಬಂದಿ ಗಂಗಾಧರ ಸೋಮನಾಯ್ಕ ನಿರೂಪಿಸಿ, ವಂದಿಸಿದರು.

WhatsApp Group Join Now
Telegram Group Join Now
Share This Article