ಪ್ರಜಾಸ್ತ್ರ ಸುದ್ದಿ
ರಾಮನಗರ(Ramanagara): ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಪಿ ಯೋಗೇಶ್ವರ್ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ಗುರುವಾರ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ವಾಸ್ತವ ಅಂಶಗಳನ್ನು ನೋಡಿಕೊಂಡು ಎರಡೂ ಪಕ್ಷಗಳ ನಾಯಕರು ಚರ್ಚಿಸಿ ಟಿಕೆಟ್ ಬಗ್ಗೆ ತೀರ್ಮಾನಿಸುತ್ತೇವೆ ಎನ್ನುವ ಮೂಲಕ ಯೋಗೇಶ್ವರಗೆ ಟಿಕೆಟ್ ಫೈನಲ್ ಅಲ್ಲ ಅಂತ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಕೇತಗಾನಹಳ್ಳಿಯಲ್ಲಿ ನಡೆದ ಪಕ್ಷದ ಸಭೆಗೂ ಮೊದಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಜೊತೆಗೆ ಟಿಕೆಟ್ ಬಗ್ಗೆ ಮಾತನಾಡಿದ್ದೇನೆ. ನಾಡಿದ್ದು ಪ್ರಮುಖರು ಸೇರಿ ನಿರ್ಧಾರ ತೆಗೆದುಕೊಳ್ಳಲಾಗುತ್ತೆ. ಶಿಗ್ಗಾಂವಿ, ಸಂಡೂರು ಸೇರಿ ಮೂರು ಕಡೆ ಎನ್ ಡಿಎ ಅಭ್ಯರ್ಥಿ ಗೆಲ್ಲಬೇಕು. ಇದು ನಮ್ಮ ಉದ್ದೇಶ ಅಂತಾ ಹೇಳಿದರು.