ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದರಿಂದ ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ರಾಮಣ್ಣ ಅಸಮಾಧಾನಗೊಂಡಿದ್ದರು. ಚನ್ನಪಟ್ಟಣ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟುವಲ್ಲಿ ಸಾಕಷ್ಟು ಕೆಲಸ ಮಾಡಿದ್ದರು. ಹೀಗಾಗಿ ಟಿಕೆಟ್ ಸಿಗುವ ಲೆಕ್ಕಾಚಾರದಲ್ಲಿದ್ದರು. ಅದು ಕೈ ತಪ್ಪಿದ್ದಕ್ಕೆ ಮುನಿಸಿಕೊಂಡಿದ್ದರು. ಹೀಗಾಗಿ ಮಂಗಳವಾರ ಡಿಸಿಎಂ ಡಿ.ಕೆ ಶಿವಕುಮಾರ್ ಸದಾಶಿವನಗರದಲ್ಲಿರುವ ತಮ್ಮ ಮನೆಗೆ ಇಬ್ಬರನ್ನು ಕರೆಸಿಕೊಂಡು ಮಾತುಕತೆ ನಡೆಸಿದರು.
ಸಿ.ಪಿ ಯೋಗೇಶ್ವರ್, ರಘುನಂದನ್ ರಾಮಣ್ಣ ಸಂಧಾನ ಯಶಸ್ವಿಯಾಗಿದೆ. ಚುನಾವಣೆ ಪ್ರಚಾರದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಉಸ್ತುವಾರಿ ವಹಿಸಿಕೊಂಡಿದ್ದರು. ನಗರಸಭೆಯ 14 ಜೆಡಿಎಸ್, ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆದುಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.