ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಅತ್ಯಾಚಾರ, ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿರುವ ಆರೋಪ ಸಂಬಂಧ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ 7 ಮಂದಿ ವಿರುದ್ಧ ಸಿಐಡಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ, ಕಿರಣ್ ಕುಮಾರ್, ಲೋಹಿತ್ ಗೌಡ, ಶ್ರೀನಿವಾಸ್, ಮಂಜುನಾಥ್ ಹಾಗೂ ಸುಧಾಕರ್ ಹೆಸರುಗಳು ದೋಷಾರೋಪ ಪಟ್ಟಿಯಲ್ಲಿವೆ.
7 ಆರೋಪಿಗಳ ವಿರುದ್ಧ 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಾಜಕಾರಣಿಗಳು, ಅಧಿಕಾರಿಗಳು ವಿಐಪಿಗಳ ಅಶ್ಲೀಲ ವಿಡಿಯೋ, ಫೋಟೋ ಇಟ್ಟುಕೊಂಡು ಕೆಲಸ ಮಾಡಿಕೊಡಲು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರಂತೆ. ಮುನಿರತ್ನ ಎದುರು ಸಿಐಡಿ ಅಧಿಕಾರಿಗಳು 63 ಪ್ರಶ್ನೆಗಳನ್ನು ಇಟ್ಟಿದ್ದರಂತೆ. ಗುತ್ತಿಗೆದಾರರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿವೆ. ಎಚ್ಐವಿ ಸೋಂಕಿತ ಮಹಿಳೆಯರನ್ನು ಹನಿಟ್ರ್ಯಾಪ್ ಗೆ ಬಳಸುತ್ತಿದ್ದರು ಅನ್ನೋ ಅತ್ಯಂತ ಗಂಭೀರ ಹಾಗೂ ಭಯಾನಕ ಆರೋಪ ಮುನಿರತ್ನ ಮೇಲಿದೆ.