Ad imageAd image

‘ಪೋಕ್ಸೋ ಪ್ರಕರಣದಲ್ಲಿ ಚಾರ್ಜ್ ಶೀಟ್, ಯಡಿಯೂರಪ್ಪಗೆ ಮಾತನಾಡುವ ನೈತಿಕತೆ ಇಲ್ಲ’

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್ ವಿಚಾರ ಸಂಬಂಧ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು,

Nagesh Talawar
‘ಪೋಕ್ಸೋ ಪ್ರಕರಣದಲ್ಲಿ ಚಾರ್ಜ್ ಶೀಟ್, ಯಡಿಯೂರಪ್ಪಗೆ ಮಾತನಾಡುವ ನೈತಿಕತೆ ಇಲ್ಲ’
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಡಾ (MUDA)ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್ ವಿಚಾರ ಸಂಬಂಧ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು(Siddaramaiah), ರಾಜ್ಯಪಾಲರು ನೀಡಿರುವ ನೋಟಿಸ್ ಗೆ ಈಗಾಗ್ಲೇ ಉತ್ತರಿಸಿದ್ದೇನೆ. ಅದನ್ನು ಒಪ್ಪಿಕೊಳ್ಳುವ ನಂಬಿಕೆಯಿದೆ. ನಿವೇಶನ ಹಂಚಿಕೆಯಲ್ಲಿ ನಾನು ಯಾವುದೇ ರೀತಿಯಲ್ಲಿ ಪ್ರಭಾವ ಬೀರಿಲ್ಲ. ಕಾನೂನು ಪ್ರಕಾರವಾಗಿ ಬಿಜೆಪಿ ಅವಧಿಯಲ್ಲಿ ನನ್ನ ಪತ್ನಿಗೆ ಬದಲಿ ನಿವೇಶನ ನೀಡಲಾಗಿದೆ ಎಂದಿದ್ದಾರೆ.

ಮುಡಾ ಅಕ್ರಮವಾಗಿ ಭೂಮಿ ವಶಪಡಿಸಿಕೊಂಡ ಸಂದರ್ಭದಲ್ಲಿ ನನ್ನ ಪತ್ನಿ(Wife) ಬದಲಿ ನಿವೇಶನ ಕೋರಿ 2014ರಲ್ಲಿ ಅರ್ಜಿ ಸಲ್ಲಿಸಿದ್ದರು. ನಾನು ಆಗ ಸಿಎಂ ಇದ್ದೆ. ಆಗ ನಾನು ಯಾವುದೇ ಕ್ರಮಗಳನ್ನು ಕೈಗೊಂಡಿರಲಿಲ್ಲ. ಸರ್ಕಾರ ಅಸ್ಥಿರಗೊಳಿಸುವ ಉದ್ದೇಶದಿಂದ ಬಿಜೆಪಿ, ಜೆಡಿಎಸ್ ನನ್ನ ಮೇಲೆ ಆಪಾದನೆ ಮಾಡುತ್ತಿವೆ. ಬಡವರ ಪರವಾಗಿ ತಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ.

82ರ ವಯಸ್ಸಿನಲ್ಲಿ ಯಡಿಯೂರಪ್ಪನವರು(BSY) ಪೋಕ್ಸೋ(POCSO) ಪ್ರಕರಣದಲ್ಲಿ ನ್ಯಾಯಾಲಯದ ದಯೆಯಿಂದ ಜೈಲು ಪಾಲಾಗಿದೆ ಬಚಾವಾಗಿದ್ದಾರೆ. ಚಾರ್ಜ್ ಶೀಟ್ ಹಾಕಿಸಿಕೊಂಡಿರುವ ಅವರು ನನ್ನ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಅವರ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣಗಳಿವೆ. ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗಬೇಕು. ಸುಳ್ಳನ್ನು ನಿರಂತರವಾಗಿ ಹೇಳಿ ಸತ್ಯ ಮಾಡಲು ಸಾಧ್ಯವಿಲ್ಲ. ಸತ್ಯಕ್ಕೆ ಅಂತಿಮ ಜಯ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article