ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಕೋವಿಡ್ 19 ಮಾದರಿಯ ಎಚ್ಎಂಪಿ ವೈರಾಣು ಸೋಂಕು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚೀನಾದಲ್ಲಿ ಕಾಣಿಸಿಕೊಂಡ ಎಚ್ಎಂಪಿ ಇದೀಗ ಕರ್ನಾಟಕದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ವೈರಾಣು ಎಲ್ಲೆಡೆ ಹರಡದಂತೆ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆಯಿಂದಲೂ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಮಾನದಲ್ಲಿ ನಿಲ್ದಾಣದಲ್ಲಿ ತಪಾಸಣೆ ಸಂಬಂಧ ಕೇಳಿದ ಪ್ರಶ್ನೆಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದಾರೆ ಎಂದರು.