ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಒಂದಲ್ಲ ಒಂದು ಕಾನೂನು ಅಸ್ತ್ರಗಳು ಪ್ರಯೋಗವಾಗುತ್ತಿವೆ. ಇದೀಗ ಅವರ ಪತ್ನಿ ಪಾರ್ವತಿ ಅವರು ನಿವೇಶನ ಹಿಂದುರಿಗಿಸಲು ಮುಡಾಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜಕೀಯ ಸಹನಾಭೂತಿ ಪಡೆಯಲು ನಿವೇಶನ ವಾಪಸ್ ಕೊಡುವ ರಾಜಕೀಯ ನಾಟಕವಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದು ಹೇಳಿದರು.
ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗ ತಪ್ಪು ಮಾಡಿರುವುದು ಅಧಿಕೃತವಾಗಿ ಒಪ್ಪಿಕೊಂಡಂತಾಗಿದೆ. 2011ರಲ್ಲಿ ಯಡಿಯೂರಪ್ಪ ವಿರುದ್ಧ ಆರೋಪ ಬಂದಾಗ ತಪ್ಪು ಮಾಡದಿದ್ದರೆ ಸೈಟ್ ಯಾಕೆ ವಾಪಸ್ ಮಾಡಿದ್ದಾರೆ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದರು. ಕಳಂಕ ಹೊತ್ತಿರುವ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಸಿದ್ದರಾಮಯ್ಯನವರು ಇವತ್ತು ಇರ್ತಾರೆ ನಾಳೆ ಹೋಗ್ತಾರೆ ಎಂದು ಮಲ್ಲಿಕಾರ್ಜುನ್ ಖರ್ಗೆ ಅವರು ಮುನ್ಸೂಚನೆ ನೀಡಿದ್ದಾರೆ ಎಂದರು.
ಹಿಂದೆ ಭ್ರಷ್ಟಾಚಾರ ಆರೋಪ ಬಂದಾಗ ಲೋಕಾಯುಕ್ತ ಮುಚ್ಚಿಸಿ ಎಸಿಬಿ ಸ್ಥಾಪಿಸಿದ್ದರು. ಕೆಂಪಣ್ಣ ಆಯೋಗ ಗಂಭೀರ ಆರೋಪಗಳನ್ನು ವರದಿಯಲ್ಲಿ ಉಲ್ಲೇಖಿಸಿದ್ದರು. ಆದರೂ ಸಿದ್ದರಾಮಯ್ಯನವರು ಕಣ್ಮುಚ್ಚಿ ಕುಳಿತಿದ್ದರು. ಮುಡಾ ಜೊತೆಗ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂಪಾಯಿಯ ಹಗರಣ ಮಾಡಿದೆ. ಇದೆಲ್ಲದರ ಬಗ್ಗೆ ಸೂಕ್ತ ತನಿಖೆಯಾಗಿ ಕಾನೂನು ಅಡಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಈ ವೇಳೆ ಸಂಸದ ಗೋವಿಂದ್ ಕಾರಜೋಳ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ರಾಜ್ಯಮುಖ್ತ ವಕ್ತಾರ ಅಶ್ವತ್ಥನಾರಾಯಣಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.