ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ(Chikkaballapura): ಕಲುಷಿತ ನೀರು(Polluted Water) ಕುಡಿದು ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಕೆ.ಕುರುಬರಹಳ್ಳಿ, ಚಿಕ್ಕಪೈಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಕೆ.ಕುರುಬರಹಳ್ಳಿ ಗ್ರಾಮದ ನಿವಾಸಿ ಸಿದ್ದಪ್ಪ(68) ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ 20ಕ್ಕೂ ಹೆಚ್ಚು ಜನರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ಹಲವು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಲುಷಿತ ನೀರು ಕುಡಿದು ವಾಂತಿ, ಭೇದಿ ಶುರುವಾಗಿದೆ. ಇದೀಗ ಓರ್ವನ ಪ್ರಾಣವೇ ಹೋಗಿದೆ. ಗ್ರಾಮದ ಅನೇಕರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಈ ಬಗ್ಗೆ ಶಾಸಕ ಪ್ರದೀಪ್ ಈಶ್ವರ(Pradeep Eshwar) ಯಾವ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.