ಪ್ರಜಾಸ್ತ್ರ ಸುದ್ದಿ
ಚಿಕ್ಕಬಳ್ಳಾಪುರ(Chikkaballapura): ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮೇಲೆ ಇಡಿ ಅಧಿಕಾರಗಳು ಗುರುವಾರ ಬೆಳಗ್ಗೆ ದಾಳಿ ಮಾಡಿದ್ದಾರೆ. ಶಾಸಕ ಹಾಗೂ ಅವರ ಸಂಬಂಧಿಕರು ಸೇರಿದಂತೆ ಅವರಿಗೆ ಸೇರಿದ 5 ಕಡೆ ದಾಳಿ ಮಾಡಲಾಗಿದೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದಾಳಿ ನಡೆಸಲಾಗಿದೆ.
ವಿದೇಶಗಳಲ್ಲಿಯೂ ಶಾಸಕ ಸುಬ್ಬಾರೆಡ್ಡಿ ಆಸ್ತಿ ಹೊಂದಿದ್ದಾರೆ. ಉದ್ಯಮಿ ಪಾಲುದಾರರೊಂದಿಗೆ ಆಸ್ತಿ ಹೊಂದಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನಲ್ಲಿರುವ ಮನೆ ಸೇರಿದಂತೆ 5 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.