Ad imageAd image

ಚಿಕ್ಕಮಗಳೂರು: ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆ

Nagesh Talawar
ಚಿಕ್ಕಮಗಳೂರು: ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು(Chikkamgaloru): ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಹತ್ಯೆಯಾಗಿದೆ. ಸಖರಾಯಪಟ್ಟಣ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶಗೌಡ(38) ಕೊಲೆಯಾಗಿದೆ. ತಡರಾತ್ರಿ ಕಲ್ಮುರುಡೇಶ್ವರ ಮಠದ ಹತ್ತಿರ ಕರೆಸಿಕೊಂಡು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆಂದು ಸಂಬಂಧಿಕರು ಆರೋಪಿಸಿದ್ದಾರೆ.

ಬ್ಯಾನರ್ ಹಾಕಿದ ವಿಚಾರವಾಗಿ ಗಣೇಶ ಹಾಗೂ ಭಜರಂಗದಳ ಕಾರ್ಯಕರ್ತರ ನಡುವೆ ಜಗಳವಾಗಿದ್ದು, ಇದೇ ವಿಚಾರವಾಗಿ ಕರೆಸಿಕೊಂಡು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಗಲಾಟೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ. ಮುಂಬರುವ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದನಂತೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆ ಕೊಡಿಸಬೇಕು ಎಂದು ಶಾಸಕ ಎಚ್.ಡಿ ತಮ್ಮಯ್ಯ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article