ಪ್ರಜಾಸ್ತ್ರ ಸುದ್ದಿ
ಜೇವರ್ಗಿ(Jevargi): ತಾಲೂಕಿನ ಮಾಗಣಗೇರಾ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪಾಲಕ ಪೋಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಾಗಣಗೆರಿಯ ಬ್ರಹನ್ಮಠದ ಡಾ.ವಿಶ್ವರಾಧ್ಯ ಮಹಾಶಿವಾಚಾರ್ಯರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಆಟದ ಜೊತೆಗೆ ಓದಿನ ಕಡೆಗೂ ಹೆಚ್ಚು ಗಮನ ಹರಿಸಬೇಕು. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸುವ ಮೂಲಕ ಶಾಲೆಗೆ, ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಮಕ್ಕಳ ದಿನಾಚರಣೆ ಪ್ರಯುಕ್ತ ಶಾಲೆಯಲ್ಲಿ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು. ಈ ವೇಳೆ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಸದಸ್ಯರು, ಪಲಾಕರು ಸೇರಿದಂತೆ ಅನೇಕರು ಭಾಗವಹಿಸಿದ್ದರು. ಪ್ರಭಾರಿ ಮುಖ್ಯ ಗುರುಗಳಾದ ರವೀಂದ್ರ ಆಳೂರ ಸ್ವಾಗತಿಸಿದರು. ಶಿಕ್ಷಕರಾದ ಬಸವರಾಜ ಕುರನಳ್ಳಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಹತ್ತನೆ ತರಗತಿ ವಿದ್ಯಾರ್ಥಿನಿ ರೂಪಾ ವಂದಿಸಿದರು.




