ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಆಟೋ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಹುಣುವಿನಡು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್(30) ಕೊಲೆಯಾದ ಯುವಕನಾಗಿದ್ದಾನೆ. ಅನೈತಿಕ ಸಂಬಂಧದ ಶಂಕೆಯ ಹಿನ್ನಲೆಯಲ್ಲಿ ಹತ್ಯೆ ಮಾಡಲಾಗಿದೆಯಂತೆ. ಮೂರ್ನಾಲ್ಕು ಜನರ ತಂಡ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆರೋಪಿಗಳ ಬಂಧನ ಬಳಿಕ ಯಾವ ಕಾರಣಕ್ಕೆ ಕೊಲೆ ನಡೆದಿದೆ ಅನ್ನೋದರ ಮಾಹಿತಿ ಸಿಗಲಿದೆ.