ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ(Chitradurga): ಪೋಕ್ಸೋ(POCSO Case) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಯನ್ನು ಬಿಡುಗಡೆ ಮಾಡಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ. ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ಜೈಲಿನಲ್ಲಿರುವ ಸ್ವಾಮೀಜಿಯನ್ನು ಬಿಡುಗಡೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಸ್ವಾಮೀಜಿಗೆ ಈ ಹಿಂದೆ ಹೈಕೋರ್ಟ್ ನಿಂದ ಜಾಮೀನು ನೀಡಲಾಗಿತ್ತು. ಆದರೆ, ಸಾಕ್ಷಿಗಳ ವಿಚಾರಣೆ ಪೂರ್ಣಗೊಳ್ಳುವ ತನಕ ಜೈಲಿನಲ್ಲಿಡಲು ಸೂಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಹೀಗಾಗಿ ಅವರನ್ನು ಮತ್ತೆ ಜೈಲಿಗೆ ಕಳಿಸಲಾಗಿತ್ತು. ಈಗ ಸಾಕ್ಷಿಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನಲೆಯಲ್ಲಿ ಬಿಡುಗಡೆಗೆ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.