Ad imageAd image

ವಿಜಯಪುರ: ಒತ್ತುವರಿ ಜಾಗಗಳ ತೆರವು ಕಾರ್ಯ ಜೋರು

ಗುಮ್ಮಟನಗರಿ ವಿಜಯಪುರ ನಗರದಲ್ಲಿ ಒತ್ತುವರಿಯಾಗಿರುವ ಜಾಗಗಳನ್ನು ತೆರವುಗೊಳಿಸುವ ಕೆಲಸ ಭರ್ಜರಿಯಾಗಿ ನಡೆದಿದೆ. ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನೇತೃತ್ವದಲ್ಲಿ ಅತಿಕ್ರಮಣಗೊಂಡ ಜಾಗ ತೆರವುಗೊಳಿಸಲಾಗುತ್ತಿದೆ.

Nagesh Talawar
ವಿಜಯಪುರ: ಒತ್ತುವರಿ ಜಾಗಗಳ ತೆರವು ಕಾರ್ಯ ಜೋರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಗುಮ್ಮಟನಗರಿ ವಿಜಯಪುರ ನಗರದಲ್ಲಿ ಒತ್ತುವರಿಯಾಗಿರುವ(Occupy) ಜಾಗಗಳನ್ನು ತೆರವುಗೊಳಿಸುವ ಕೆಲಸ ಭರ್ಜರಿಯಾಗಿ ನಡೆದಿದೆ. ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ನೇತೃತ್ವದಲ್ಲಿ ಅತಿಕ್ರಮಣಗೊಂಡ ಜಾಗ ತೆರವುಗೊಳಿಸಲಾಗುತ್ತಿದೆ. ಇದೇ ರೀತಿ ಐತಿಹಾಸಿಕ ತಾಜಬಾವಡಿ(Tajbavadi) ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗದ ಮೆಲೆ ಅನಧಿಕೃತವಾಗಿ ನಿರ್ಮಿಸಿದ್ದ ಕಟ್ಟಡಗಳ ಭಾಗ, ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ(Municipal Corporation) ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು.

ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು ಅವಶ್ಯಕವಿದ್ದ ಕಾರಣ ಈಗಾಗಲೇ ರಸ್ತೆ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಿಸಿದ ಭಾಗಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಿ ಸೂಚನೆ ಸಹ ನೀಡಲಾಗಿತ್ತು.  ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ತೆರವು ಕಾರ್ಯಾಚರಣೆ ಪರಿಶೀಲನೆ ನಡೆಸಿ, ಐತಿಹಾಸಿಕ ತಾಜ್‌ಬಾವಡಿ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸಂರಕ್ಷಣೆ ಮಾಡಲು ವರ್ಲ್ಡ್ ಮಾನುಮೆಂಟ್ ಫಂಡ್ ಇಂಡಿಯಾ ಅಸೋಸಿಯೇಶನ್ ಸಂಸ್ಥೆ ನಿರ್ಧರಿಸಿದ್ದು, ಈ ಕಾರ್ಯಕ್ಕೆ ಟಿಸಿಎಸ್ ಫೌಂಡೇಶನ್ ಸಂಸ್ಥೆ ಸಿಎಸ್.ಆರ್ ನಿಧಿಯಡಿ ಅಭಿವೃದ್ದಿಗೊಳಿಸಲು ಉದ್ದೇಶಿಸಲಾಗಿದೆ. ಮುಂಬರುವ ದಿನಗಳಲ್ಲಿ ಕೂಡ ನಗರದ ವಿವಿಧೆಡೆ ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಿ ನಿಯಮಾನುಸಾರ ತೆರವುಗೊಳಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅತಿಕ್ರಮಣ ತೆರವು ಕಾರ್ಯಾಚರಣೆಯು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರ ನೇತೃತ್ವದಲ್ಲಿ  ನಡೆದ  ಕಾರ್ಯಾಚರಣೆಯಲ್ಲಿ ಪಾಲಿಕೆಯ ವಲಯ ಆಯುಕ್ತ ಸುನೀಲ ಪಾಟೀಲ, ಉಪ ಆಯುಕ್ತ ವಿಠ್ಠಲ ಹೊನ್ನಳ್ಳಿ, ಕಾರ್ಯಪಾಲಕ ಅಭಿಯಂತರ ವಿದ್ಯಾಧರ ನ್ಯಾವಗೊಂಡ, ಸಹಾಯಕ ಕಾರ್ಯಪಾಲಕ ಅಭಿಯಂತರ ಯಲ್ಲಪ್ಪ ಹಳ್ಳಿ ಸೇರಿದಂತೆ ಪಾಲಿಕೆ ಅಧಿಕಾರಿ, ಸಿಬ್ಬಂದಿ ಭಾಗವಹಿಸಿದ್ದರು. ಕಾರ್ಯಾಚರಣೆ ಸಹಕಾರ ಹಾಗೂ ಭದ್ರತೆ ಒದಗಿಸಿದ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಪಾಲಿಕೆ ಆಯುಕ್ತರು ಅಭಿನಂದನೆ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Share This Article