ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಸ್ ಹಾಗೂ ಕಂಟೈನರ್ ನಡುವೆ ಗುರುವಾರ ನಸುಕಿನಜಾವ ಭೀಕರ ಅಪಘಾತ ನಡೆದಿದೆ. ಈ ವೇಳೆ 9 ಜನರು ಮೃತಪಟ್ಟಿದ್ದು, 21 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರ ತಲಾ 5 ಲಕ್ಷ ರೂಪಾಯಿ, ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು. ಇದಕ್ಕೆ ಕಾರಣವನ್ನು ಪತ್ತೆ ಹಚ್ಚಲಾಗುವುದು. ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.




