ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ನಬಾರ್ಡ್(NABARD) ಕೃಷಿ ಸಾಲದಲ್ಲಿ ಶೇಕಡ 58.ರಷ್ಟು ಕಡಿತ ಮಾಡಲಾಗಿದೆ. ಇದರಿಂದಾಗಿ ರಾಜ್ಯದ ರೈತರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಆದ್ದರಿಂದ ಸಾಲದ ಮಿತಿಯನ್ನು ಹೆಚ್ಚಿಸಿ ಅನುಕೂಲ ಮಾಡಿಕೊಡಬೇಕೆಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಮನವಿ ಸಲ್ಲಿಸಿದರು. ಈ ವೇಳೆ ಸಚಿವರಾದ ಭೈರತಿ ಸುರೇಶ್, ಚೆಲುವರಾಯಸ್ವಾಮಿ ಸೇರಿ ಇತರರು ಹಾಜರಿದ್ದರು.
2024-25ನೇ ಸಾಲಿನಲ್ಲಿ ಕರ್ನಾಟಕ ಸರ್ಕಾರ 35 ಲಕ್ಷ ರೈತರಿಗೆ 25 ಸಾವಿರ ಕೋಟಿ ಅಲ್ಪಾವಧಿ ಸಾಲ(Loan) ವಿತರಿಸುವ ಗುರಿಯನ್ನು ಹೊಂದಿದೆ. 2023-24ನೇ ಹಣಕಾಸು ವರ್ಷದಲ್ಲಿ ಅಲ್ಪಾವಧಿ ಸಹಕಾರಿ ಸಾಲ ವ್ಯವಸ್ಥೆಯಡಿ ಕರ್ನಾಟಕದಲ್ಲಿ 22.902 ಕೋಟಿ ಅಲ್ಪಾವಧಿ ಸಾಲ ವಿತರಿಸಲಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ. ಅಲ್ಲದೆ, 2023-24ನೇ ಸಾಲಿನಲ್ಲಿ ನಬಾರ್ಡ್ ಕೃಷಿ ಚಟುವಟಿಕೆಗಳಿಗೆ 5,600 ಕೋಟಿ ಮೊತ್ತದ ರಿಯಾಯಿತಿ ದರದ ಸಾಲದ ಮಿತಿಗೆ ಅನುಮೋದನೆ ನೀಡಿತ್ತು. 2024-25ನೇ ಸಾಲಿನಲ್ಲಿ 9,162 ಕೋಟಿ ರೂಪಾಯಿಗೆ ಪ್ರಸ್ತಾವನೆ ಸಲ್ಲಿದ್ದಿರೂ ಕೇವಲ 2,340 ಕೋಟಿ ರಿಯಾಯಿತಿ ದರ ಸಾಲವನ್ನು ಅನುಮೋದಿಸಿದೆ. ಇದು ಕಳೆದ ವರ್ಷಕ್ಕಿಂತ ಶೇಕಡ 58ರಷ್ಟು ಕಡಿಮೆ ಇದೆ. ಹೀಗಾಗಿ ರೈತರ ಹಿತದೃಷ್ಟಿಯಿಂದ, ಅವರು ಉತ್ತಮ ಬೆಳೆ ಬೆಳೆಯಲು ಅನುಕೂಲವಾಗುವಂತೆ 2024-25ನೇ ಸಾಲಿನಲ್ಲಿ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವಂತೆ ನಬಾರ್ಡ್ ಹಾಗೂ ಆರ್ ಬಿಐಗೆ ನಿರ್ದೇಶನ ನೀಡುವಂತೆ ಕೋರಲಾಗಿದೆ. ಮನವಿ ಪತ್ರ ಇಲ್ಲಿದೆ ನೋಡಿ..