Ad imageAd image

ನಾಳೆ ಕೃಷ್ಣೆಗೆ ಬಾಗಿನ ಅರ್ಪಿಸಲಿರುವ ಸಿಎಂ, ಡಿಸಿಎಂ

ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಇವರ ಸಹಯೋಗದಲ್ಲಿ ಆಗಸ್ಟ್ 21ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿಯ

Nagesh Talawar
ನಾಳೆ ಕೃಷ್ಣೆಗೆ ಬಾಗಿನ ಅರ್ಪಿಸಲಿರುವ ಸಿಎಂ, ಡಿಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ(KBJNL) ನಿಯಮಿತ ಇವರ ಸಹಯೋಗದಲ್ಲಿ ಆಗಸ್ಟ್ 21ರಂದು ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿಯ ಸಾಗರದಲ್ಲಿ  ಕೃಷ್ಣೆಯ ನದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯವರು(Siddaramaiah) ಬಾಗಿನ ಅರ್ಪಿಸಲಿದ್ದಾರೆ. ಕನ್ನಡ ನಾಡಿನ ಪ್ರತಿಷ್ಠಿತ ಆಲಮಟ್ಟಿ(almatti dam) ಆಣೆಕಟ್ಟೆಯಲ್ಲಿ ಗರಿಷ್ಠ ಮಟ್ಟಕ್ಕೆ ನೀರು ಸಂಗ್ರಹಣೆಯಾದ ಹಿನ್ನಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ(DK Shivakumar) ಉಪಸ್ಥಿತಿ, ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ,  ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಅಬಕಾರಿ ಖಾತೆ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.

WhatsApp Group Join Now
Telegram Group Join Now
Share This Article