Ad imageAd image

ವಿಬಿ-ಜಿ ರಾಮ-ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸಿದ ಸಿಎಂ

Nagesh Talawar
ವಿಬಿ-ಜಿ ರಾಮ-ಜಿ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸಿದ ಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮನರೇಗಾ ಬದಲಾಗಿ ವಿಬಿ-ಜಿ ರಾಮ-ಜಿ ಅನ್ನೋ ಕಾಯ್ದೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಇದನ್ನು ರದ್ದುಗೊಳಿಸುವಂತೆ ಹಾಗೂ ಮನರೇನಾ ಮರುಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಸದನದಲ್ಲಿ ನಿರ್ಣಯ ಮಂಡಿಸಿದರು. ವಿರೋಧ ಪಕ್ಷಗಳ ಸದಸ್ಯರ ತೀವ್ರ ವಿರೋಧದ ನಡುವೆ ನಿರ್ಣಯ ಮಂಡಿಸಿದರು.

ಕರ್ನಾಟಕದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ರಕ್ಷಣೆ ಮಾಡುವ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ವಿಬಿ-ಜಿ ರಾಮ-ಜಿ ಕಾಯ್ದೆಯನ್ನು ರದ್ದುಗೊಳಿಸಬೇಕು. ಇದರಿಂದ ರಾಜ್ಯದ ಖಜಾನೆಗೆ ಹೊರೆಯಾಗುತ್ತದೆ. ಜೊತೆಗೆ ಗ್ರಾಮ ಪಂಚಾಯ್ತಿಗಳ ಅಧಿಕಾರಿ, ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಹೀಗಾಗಿ ಇದನ್ನು ರದ್ದಗೊಳಿಸಬೇಕು ಎಂದು ಈ ಸದನದ ಮೂಲಕ ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

WhatsApp Group Join Now
Telegram Group Join Now
Share This Article