ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ದಲಿತ ಸಮುದಾಯಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿ ಸ್ವೀಕರಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದ್ದಾರೆ. ಇತ್ತೀಚೆಗಷ್ಟೇ ಈ ಸಂಬಂಧ ಸಭೆ ನಡೆಸಲಾಗಿತ್ತು. ವಾರದೊಳಗೆ ಮಧ್ಯಂತರ ವರದಿ ನೀಡಲಿದ್ದಾರೆ ಎಂದು ಹೇಳಲಾಗಿತ್ತು. ಅದರಂತೆ ಇದೀಗ ಮಧ್ಯಂತರ ವರದಿ ಸಿಎಂ ಕೈ ಸೇರಿದೆ. ಈ ವೇಳೆ ಸಚಿವರಾದ ಹೆಚ್.ಸಿ ಮಹಾದೇವಪ್ಪ, ಕೆ.ಹೆಚ್.ಮುನಿಯಪ್ಪ, ಮಾಜಿ ಸಚಿವ ಹೆಚ್.ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಒಳಮೀಸಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಮಾತುಗಳು ಕೇಳಿ ಬರುತ್ತಿವೆ. ದಲಿತ ಸಮುದಾಯದ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕೆಲವರು ಇದು ಜಾರಿಗೆ ಬರಬೇಕು ಎಂದರೆ, ಇನ್ನು ಕೆಲವರು ಇದನ್ನು ಜಾರಿಗೆ ತರಬಾರದು. ಒಳಮೀಸಲಾತಿ ಜಾರಿಗೆ ಬಂದರೆ ಕಾನೂನು ಹೋರಾಟ ಮಾಡುತ್ತೇವೆ ಎನ್ನುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.