ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾದವು. ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದಲ್ಲಿ ಮದ್ಯಪಾನ, ಧೂಮಪಾನ, ಗುಟ್ಕಾ ಹಾಗೂ ಮೊಬೈಲ್ ನಿಷೇಧಿಸಲಾಗಿದೆ ಎಂದಿದ್ದಾರೆ.
ನನ್ನ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಯಿತು. ಬೆಟ್ಟದಲ್ಲಿ ಮದ್ಯಪಾನ, ಧೂಮಪಾನ, ಗುಟ್ಕಾ, ಪ್ಲಾಸ್ಟಿಕ್ ನಿಷೇಧಿಸಲಾಗಿದೆ. ದೇವಿಯ ದರ್ಶನ ಪಡೆಯುವ ಸಂದರ್ಭದಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ದೇಗುಲದ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಒಳ್ಳೆಯ ರೀತಿಯ ವ್ಯವಸ್ಥೆ ಕಲ್ಪಿಸುವಂತೆ, ಸುರಕ್ಷತೆ ದೃಷ್ಟಿಯಿಂದ ಸಿಸಿಟಿವಿ ಅಳವಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಹದೇಶ್ವರ ಬೆಟ್ಟದ ರೀತಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರಕ್ಕೂ ಪ್ರಾಧಿಕಾರ ರಚಿಸಲಾಗಿದೆ. ಕ್ಷೇತ್ರ ಹಾಗೂ ದೇವಸ್ಥಾನಕ್ಕೆ ಸೇರಿದ ಜಾಗ ಅಭಿವೃದ್ಧಿ ಮಾಡುವುದು ಪ್ರಾಧಿಕಾರದ ಉದ್ದೇಶ. ಇಲ್ಲಿ ಅಪಾರಧ ಕೃತ್ಯ ತಡೆಗಟ್ಟಲು ಟಾಸ್ಕ್ ಪೋರ್ಸ್ ರಚಿಸಲಾಗಿದೆ ಎಂದರು.