ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಕಾಂಗ್ರೆಸ್ ಸರ್ಕಾರದಲ್ಲಿ ಶೇಕಡ 60ರಷ್ಟು ಕಮಿಷನ್ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಮಾಡಿರುವ ಆರೋಪ ಸಾಬೀತು ಪಡಿಸಿಲಿ. ಈ ರೀತಿಯಾಗಿ ಗಾಳಿಯಲ್ಲಿ ಗುಂಡು ಹೊಡೆಯಬಾರದು ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ.
ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.