Ad imageAd image

ಉಗ್ರರ ದಾಳಿ, ಕೇಂದ್ರದ ಗುಪ್ತಚರ ವೈಫಲ್ಯ: ಸಿಎಂ ಸಿದ್ದರಾಮಯ್ಯ

Nagesh Talawar
ಉಗ್ರರ ದಾಳಿ, ಕೇಂದ್ರದ ಗುಪ್ತಚರ ವೈಫಲ್ಯ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಉಗ್ರರ ದಾಳಿ ಪೂರ್ವಯೋಜಿತ ಸಂಚು ಆಗಿದೆ. ಪುಲ್ವಾಮಾ ಮಾದರಿಯಲ್ಲಿಯೇ ಘಟನೆ ನಡೆದಿದ್ದು, ಇಲ್ಲಿ ಮತ್ತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಂಡು ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೊಂದು ದೊಡ್ಡ ಮಟ್ಟದ ದಾಳಿ ನಡೆಯುವ ಬಗ್ಗೆ ಮೊದಲೇ ತಿಳಿಯದೆ ಇರುವುದು ಗುಪ್ತಚರ ಇಲಾಖೆ ವೈಫಲ್ಯವೆಂದರು.

ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ಅತ್ಯಂತ ತೀವ್ರವಾಗಿ ಖಂಡಿಸುತ್ತೇನೆ. ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ರಾವ್ ಹಾಗೂ ಭರತ್ ಭೂಷಣ್ ಎಂಬುವರು ಮೃತಪಟ್ಟಿದ್ದಾರೆ. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಕಾಶ್ಮೀರಕ್ಕೆ ಕಳಿಸಲಾಗಿದೆ.

ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ಚಿಂತಿಸಿ ಪರಿಶೀಲಿಸಲಿದೆ. ಪಹಲ್ಗಾಮ್‌ನ ಉಗ್ರರ ದಾಳಿ ಪ್ರಕರಣದಲ್ಲಿ ಕೇಂದ್ರ ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ. ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಹೇಳಿದರು.

WhatsApp Group Join Now
Telegram Group Join Now
Share This Article