ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಪಾಕಿಸ್ತಾನ್ ಪರ ಘೋಷಣೆ ಕೂಗಿದ ವ್ಯಕ್ತಿಯೊಬ್ಬನ ಮೇಲೆ ನಡೆದ ಗುಂಪು ಹಲ್ಲೆಯಲ್ಲಿ ಕೊಲೆಯಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನ್ ಪರ ಘೋಷಣೆ ಕೂಗುವುದು ದೇಶದ್ರೋಹ. ಪಾಕಿಸ್ತಾನ್ ಯಾರೇ ಮಾತನಾಡಿದರು ತಪ್ಪು. 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ವರದಿ ಬಂದ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಇನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹ ಈ ಬಗ್ಗೆ ಮಾತನಾಡಿದ್ದು, ಭಾರತದಲ್ಲಿದ್ದುಕೊಂಡು ಪಾಕಿಸ್ತಾನ್ ಪರ ಘೋಷಣೆ ಕೂಗುವುದನ್ನು ನಾವು ಸಹಿಸುವುದಿಲ್ಲ. ನಮ್ಮ ಮನೆಯವರು ಹಾಗೇ ಕೂಗಿದ್ದರೂ ಕ್ರಮ ತೆಗೆದುಕೊಳ್ಳಬೇಕು ಎಂದಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದೊಳಗೆ ನುಗ್ಗಿ ಹೊಡೆಯಿರಿ. ಇದು ನನ್ನ ವೈಯಕ್ತಿಕ ಅಭಿಪ್ರಾಯ. 1971ರಲ್ಲಿ ಇಂದಿರಾ ಗಾಂಧಿಯವರು ಪಾಕಿಸ್ತಾನದ ಮಂಡಿಯೂರಿಸಿದ್ದರು ಎಂದರು.