ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಜೆಪಿ ಕಾರ್ಯಕರ್ತ ವಿನಯ ಸೋಮಯ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಹಾಗೂ ಶಾಸಕ ಮಂತರ್ ಗೌಡ ಹೆಸರನ್ನು ಎಫ್ಐಆರ್ ಸೇರಿಲು ಬಿಜೆಪಿ ಆಗ್ರಹಿಸಿದೆ. ಇದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿ ಆತ್ಮಹತ್ಯೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಲಾಗಿದೆ. ತನಿಖೆ ಶುರುವಾಗಿದೆ ಎಂದರು.
ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲಿ ರಾಜಕೀಯ ಮಾಡುವುದು ಅವರಿಗೆ ಕರಗತವಾಗಿದೆ. ತನಿಖೆ ನಡೆಯುವ ಸಂದರ್ಭದಲ್ಲಿ ಪ್ರಕರಣದ ಬಗ್ಗೆ ಮಾತನಾಡಬಾರದು. ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.