ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಬಿಎಂಪಿ(BBMP) ಗುತ್ತಿಗೆದಾರ ಚಲುವರಾಜ ಎಂಬುವವರಿಗೆ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಲಂಚದ ಆರೋಪ ಹಾಗೂ ದಲಿತ ಮತ್ತು ಒಕ್ಕಲಿಗ ಸಮುದಾಯದವರ ಬಗ್ಗೆ ಆಡಿದ ಅಶ್ಲೀಲ ಮಾತಿನ ಆಡಿಯೋ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾಯ್ತೆರದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ಕರ್ನಾಟಕ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ @BJP4Karnataka ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ.
ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನ ದಲಿತರು,…
— Siddaramaiah (@siddaramaiah) September 14, 2024
ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕಷ್ಟೇ ಸೀಮಿತ. ಚುನಾವಣೆ ಮುಗಿದರೆ ಈ ನಾಡಿನಲ್ಲಿ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಕಿಡಿ ಕಾರಿದ್ದಾರೆ.