ಪ್ರಜಾಸ್ತ್ರ ಸುದ್ದಿ
ಹಾಸನ(Hasana): ಕೆಪಿಸಿಸಿ ಹಾಗೂ ಸ್ವಾಭಿಮಾನಿಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಜನಕಲ್ಯಾಣ ಸಮಾವೇಶ ನಡೆಯಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾವೆಲ್ಲ ಜೆಡಿಎಸ್ ಕಟ್ಟಿ ಬೆಳೆಸಿದೇವು. ಆದರೆ, ನಾನು ಅಹಿಂದ ಸಮಾವೇಶ ಮಾಡಿದೆ ಎಂದು ಉಚ್ಛಾಟಿಸಿದರು. ನನ್ನನ್ನು ಸೇರಿದಂತೆ ಯಾರನ್ನೂ ದೇವೇಗೌಡರು ಬೆಳೆಸಿಲ್ಲ. ಒಕ್ಕಲಿಗರನ್ನು ಸಹ ಬೆಳೆಸಿಲ್ಲ ಎಂದು ವಾಗ್ದಾಳಿ ನಡೆಸಿದರು.
ನಾನು, ಜಾಲಪ್ಪ ಇಲ್ಲದೆ ಹೋಗಿದ್ದರೆ 1994ರಲ್ಲಿ ದೇವೇಗೌರು ಮುಖ್ಯಮಂತ್ರಿ ಆಗಲು ಸಾಧ್ಯವಿರಲಿಲ್ಲ. ಬಿ.ಎಲ್ ಶಂಕರ್, ವೈ.ಕೆ ರಾಮಯ್ಯ ಅವರನ್ನೂ ಸಹ ಬೆಳೆಸಲಿಲ್ಲ. 2019ರಲ್ಲಿ ಮೋದಿ ಪ್ರಧಾನಿಯಾದರೆ ದೇಶ ಬಿಡುತ್ತೇನೆ ಎಂದರು. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಗರ್ವಭಂಗ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಿರಿ ಎಂದು ಹೇಳಿದರು. ಅವರಿಗೆ ಒಳ್ಳೆಯ ಆರೋಗ್ಯ, ಆಯುಷ್ಯ ಕೊಡಲಿ. ರಾಜಕಾರಣ ಮಾಡಲಿ. ಆದರೆ, ದ್ವೇಷದ, ಸೇಡಿನ ರಾಜಕಾರಣ ಮಾಡಬೇಡಿ ಎಂದರು. ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ದೊಡ್ಡ ಸಮಾವೇಶ ಆಗಿರಲಿಲ್ಲ. ಇಲ್ಲಿಗೆ ಬಂದಿರುವ ಕಾರ್ಯಕರ್ತರಿಗೆಲ್ಲ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಈ ವೇಳೆ ಎಐಸಿಸಿ ಪ್ರಧಾನಿ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ್, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಹೆಚ್.ಸಿ ಮಹಾದೇವಪ್ಪ, ಜಿ.ಪರಮೇಶ್ವರ್, ಕೆ.ಎನ್ ರಾಜಣ್ಣ, ಜಮೀರ್ ಅಹ್ಮದ್, ಸತೀಶ್ ಜಾರಕಿಹೊಳಿ, ಕೆ.ವೆಂಕಟೇಶ್, ಲಕ್ಷ್ಮಿ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷ ಸ್ವಮ್ಯಾ ರೆಡ್ಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.