Ad imageAd image

ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿಎಂ ಸಿದ್ದರಾಮಯ್ಯ

71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಗೆ

Nagesh Talawar
ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ(Bagalakote): 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಗೆ ಬಿಪಿಎಲ್(BPL Card) ಕಾರ್ಡ್ ಗಳು ರದ್ದಾಗುತ್ತವಾ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಅವರು, ಅನರ್ಹರ ಕಾರ್ಡ್ ವಾಪಸ್ ಪಡೆಯುವ ಆಲೋಚನೆ ಇದೆ. ಇದು ಇನ್ನು ಅಂತಿಮ ತೀರ್ಮಾನವಾಗಿಲ್ಲ. ಈ ಬಗ್ಗೆ ಆಹಾರ ಇಲಾಖೆ ಪರಿಶೀಲನೆ ನಡೆಸಿದೆ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ಹೇಳಿದರು.

ಆದಾಯ ತೆರಿಗೆ(Tax) ಕಟ್ಟುವರ ಬಳಿ, ಸರ್ಕಾರಿ(Govt Job) ನೌಕರರ ಬಳಿ ಬಿಪಿಎಲ್ ಕಾರ್ಡ್ ಇರಬೇಕಾ ಎಂದು ಮರುಪ್ರಶ್ನಿಸಿದರು. ಯಾವ ಕಾರ್ಡ್ ಗಳು ರದ್ದಾಗುವುದಿಲ್ಲ. ಅನರ್ಹರಿಂದ ವಾಪಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಅಂತಾ ಹೇಳಿದರು. ಈ ಮೂಲಕ ಬಿಪಿಎಲ್ ಕಾರ್ಡ್ ರದ್ದಾಗುತ್ತವೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದರು.

WhatsApp Group Join Now
Telegram Group Join Now
Share This Article