Ad imageAd image

24,300 ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ

Nagesh Talawar
24,300 ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ರಾಜ್ಯದಲ್ಲಿ 2,84,881 ಸರ್ಕಾರಿ, ಅರೆಸರ್ಕಾರಿ ಹುದ್ದೆಗಳು ಖಾಲಿ ಇವೆ. ಇದರಲ್ಲಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ. ಇವುಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚುಕ್ಕೆ ಗುರುತಿನ ಪ್ರಶ್ನೆಗೆ ಮುಖ್ಯಮಂತ್ರಿ ಈ ರೀತಿ ಉತ್ತರಿಸಿದರು.

ಶಾಲಾ ಶಿಕ್ಷಣ ಇಲಾಖೆಯಲ್ಲಿ 5,267, ಆರೋಗ್ಯ ಇಲಾಖೆ 1,725, ಕೃಷಿ ಇಲಾಖೆ 553, ವೈದ್ಯಕೀಯ ಶಿಕ್ಷಣ ಇಲಾಖೆ 333, ಸಾರಿಗೆ 6,847, ಹಣಕಾಸು 2,243, ಇಂಧನ ಇಲಾಖೆ 2,400, ಸಹಕಾರ ಇಲಾಖೆ 180, ನಗರಾಭಿವೃದ್ಧಿ 185 ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆ 892 ಸೇರಿದಂತೆ ವಿವಿಧ ಇಲಾಖೆಗಳಲ್ಲಿ 24,300 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ ಎಂದು ಮಾಹಿತಿ ನೀಡಿದರು.

WhatsApp Group Join Now
Telegram Group Join Now
Share This Article