ಪ್ರಜಾಸ್ತ್ರ ಸುದ್ದಿ
ಸೋಲಾಪುರ(Solapura): ಜನರಿಂದ ಆಶೀರ್ವಾದ ಪಡೆದು, ಬಹುಮತದಿಂದ ಸರ್ಕಾರ ರಚನೆ ಮಾಡಿರುವುದನ್ನು ಹಣಬಲ, ಅಧಿಕಾರ ದುರ್ಬಳಕೆ ಮೂಲಕ ಉರುಳಿಸಿ ಕುರ್ಚಿ ಹಿಡಿಯುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದರು. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸೋಲಾಪುರದ ಮಂಗಳ್ ವೇಡಾದಲ್ಲಿ ಶನಿವಾರ ಕಾಂಗ್ರೆಸ್ ಆಯೋಜಿಸಿದ್ದ ಪ್ರಚಾರದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕೇಂದ್ರದ ಬಿಜೆಪಿ ಸರ್ಕಾರದ ದುರಾಡಳಿತ, ಅಧಿಕಾರ ದಾಹಕ್ಕೆ ಜನರು ಬೇಸತ್ತಿದ್ದಾರೆ. ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಜನಪರ ಕೆಲಸ ಮಾಡಿದ ಉದಾಹರಣೆ ಇಲ್ಲ. ಇದಕ್ಕೆ ಹಾಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಹಿಂದಿನ ಕರ್ನಾಟಕ ಸರ್ಕಾರಗಳ ಆಡಳಿತವೇ ಸಾಕ್ಷಿ ಎಂದು ಹೇಳಿದರು. ಈ ವೇಳೆ ಮಹಾರಾಷ್ಟ್ರ ಮಾಜಿ ಸಿಎಂ ಸುಶೀಲಕುಮಾರ್ ಶಿಂಧೆ, ಸಂಸದೆ ಪ್ರಣತಿ ಶಿಂಧೆ ಸೇರಿದಂತೆ ಇತರರು ಉಪಸ್ಥಿತರಿದ್ದರು.