Ad imageAd image

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ 501 ಕೋಟಿ ರೂಪಾಯಿಗಳ ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು

Nagesh Talawar
ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವರುಣಾ(Varuna): ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಪ್ರತಿನಿಧಿಸುವ ವರುಣಾ ಕ್ಷೇತ್ರದಲ್ಲಿ 501 ಕೋಟಿ ರೂಪಾಯಿಗಳ ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಮಂಗಳವಾರ ನೆರವೇರಿಸಿದರು. ಈ ವೇಳೆ ಮಾತನಾಡಿದ ವರುಣಾ ಕ್ಷೇತ್ರದ ಅಭಿವೃದ್ಧಿ ನಿರಂತರ ಅನುದಾನ ಕೊಡಲಾಗುತ್ತಿದೆ. ಇದು ಉಪಕಾರವಲ್ಲ. ಕ್ಷೇತ್ರದ ಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವುದು ನನ್ನ ಜವಾಬ್ದಾರಿ ಎಂದರು.

ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ. ಬಡವರ ವಿರೋಧಿ. ಮೂರು ಬಾರಿ ಪ್ರಧಾನಿ ಆಗಿರುವ ಮೋದಿ ಅವರು ಕೊಟ್ಟ ಮಾತಿನಂತೆ ನಡೆದ ಉದಾಹರಣೆ ಇದೆಯಾ? ಕೇಂದ್ರದಲ್ಲಿರುವ ಮೋದಿ ಅವರ ಸರ್ಕಾರವಾಗಲಿ, ರಾಜ್ಯದಲ್ಲಿದ್ದ ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಜನರ ಕಲ್ಯಾಣ ಮಾಡದೆ ಲೂಟಿ ಮಾಡಿದರು. ನಾನು ಮಂತ್ರಿಯಾಗಿ 45 ವರ್ಷ ಆಯ್ತು. ಒಂದು ಕಪ್ಪು ಚುಕ್ಕೆ ಇಲ್ಲ. ಹಿಂದುಳಿದ ವರ್ಗದ ನಾನು ಎರಡು ಬಾರಿ ಸಿಎಂ ಆದೆ ಎಂದು ಬಿಜೆಪಿಯವರಿಗೆ ಹೊಟ್ಟೆ ಕಿಚ್ಚು. ಇದನ್ನು ನೀವು ಸಹಿಸ್ತೀರಾ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರ ಇದ್ದಾಗಲೆಲ್ಲ ವರುಣಾ ಕ್ಷೇತ್ರ ಮಾತ್ರವಲ್ಲ ರಾಜ್ಯದ ಎಲ್ಲ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಹತ್ತು ಹಲವು ಭಾಗ್ಯಗಳನ್ನು ನೀಡುವುದರ ಜೊತೆಗೆ ಹಲವು ನಿಗಮಗಳ ಸಾಲ ತೀರಿಸಿದ್ದೇನೆ. ಅಂಬೇಡ್ಕರ್ ಅವರ ಆಶಯದಂತೆ ಬಡವರಿಗೆ ಆರ್ಥಿಕ ಶಕ್ತಿ ಕೊಡುವ ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇನೆ. ರಾಜ್ಯದ ಜನತೆ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ, ಜೆಡಿಎಸ್ ಷಡ್ಯಂತ್ರಕ್ಕೆ ಹೆದರಲ್ಲ, ಬಗ್ಗಲ್ಲ. ಸಾಮಾಜಿಕ ನ್ಯಾಯದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

WhatsApp Group Join Now
Telegram Group Join Now
Share This Article