Ad imageAd image

ಹಸಿವಿನ ಸಂಕಟ ಗೊತ್ತಿದ್ದು, ಅನ್ನಭಾಗ್ಯ ಯೋಜನೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ

Nagesh Talawar
ಹಸಿವಿನ ಸಂಕಟ ಗೊತ್ತಿದ್ದು, ಅನ್ನಭಾಗ್ಯ ಯೋಜನೆ ತಂದಿದ್ದೇವೆ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಸಿವಿನ ಸಂಕಟ, ಅನ್ನದ ಮೌಲ್ಯ ಗೊತ್ತಿದೆ. ಹೀಗಾಗಿ ಹಸಿದವರಿಗೆ ಹೊಟ್ಟೆ ತುಂಬಿಸುವ ಸಲುವಾಗಿ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.

ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ. ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಅಂತಾ ತಿಳಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ, ವಸತಿ ಸಚಿವ ಜಮೀರ್ ಅಹ್ಮದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article