Ad imageAd image

ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಿಎಂ ಸಿದ್ದರಾಮಯ್ಯ

ಮಲೆನಾಡಿನ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ಸರ್ಕಾರ ಜೈ ಎಂದಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಿದೆ.

Nagesh Talawar
ಡಾ.ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮಲೆನಾಡಿನ(Malenadu) ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಡಾ.ಕಸ್ತೂರಿ ರಂಗನ್(Dr Kasturirangan Report) ವರದಿ ತಿರಸ್ಕಾರಕ್ಕೆ ಸರ್ಕಾರ ಜೈ ಎಂದಿದೆ. ಗುರುವಾರ ನಡೆದ ಸಚಿವ ಸಂಪುಟದಲ್ಲಿ ಕಸ್ತೂರಿ ರಂಗನ್ ವರದಿ ತಿರಸ್ಕರಿಸಲಾಗಿದೆ. ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ನಾವು ಪರಸ್ಕರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಪಶ್ಚಿಮಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು. ಮಲೆನಾಡಿಗರ ಈ ಆತಂಕವನ್ನು ನಿವಾರಿಸುವ ಉದ್ದೇಶದೊಂದಿಗೆ ಡಾ.ಕಸ್ತೂರಿ ರಂಗನ್‌ ವರದಿಯನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದು ಸಿಎಂ ತಮ್ಮ ಸಾಮಾಜಿಕ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಈ ಬಗ್ಗೆ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಹೆಚ್.ಕೆ ಪಾಟೀಲ(H.K Patil) ಮಾತನಾಡಿದ್ದರು. ಕಸ್ತೂರಿ ರಂಗನ್ ವರದಿ ಅನ್ವಯ 20,668 ಚದರ್ ಕಿಲೋ ಮೀಟರ್ ಪ್ರದೇಶ ಪರಿಸರ ಸೂಕ್ಷ್ಮ ಪ್ರದೇಶವಾಗಿ ಗುರುತಿಸಲಾಗಿದೆ. ವಾಸ್ತವ ಲೋಪಗಳನ್ನು ತಿದ್ದುಪಡಿ ಮಾಡಿದಾಗ 19,252.70 ಚದರ್ ಕಿಲೋ ಮೀಟರ್ ಆಗುತ್ತದೆ. ವಿವಿಧ ಕಾನೂನುಗಳ ಅಡಿಯಲ್ಲಿ ಅರಣ್ಯ(Forest) ಅಥವ ಪರಿಸರ ಸೂಕ್ಷ್ಮ ವಲಯವಾಗಿ ಅಧಿಸೂಚಿಸಿ 16036 ಚದರ ಕಿಲೋ ಮೀಟರ್ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Share This Article