ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): 2ಎ ಮೀಸಲಾತಿ ಹೋರಾಟದ ವೇಳೆ ನಡೆದ ಲಾಠಿ ಚಾರ್ಜ್ ವಿಚಾರಕ್ಕೆ ಸಂಬಂಧ ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ ಸಾಕ್ಷಿಯಿದೆಮ ಬ್ಯಾರಿಕೇಡ್ ಕೆಡವಿ ನುಗ್ಗಿದ್ದಾರೆ. ಪೊಲೀಸರೇ ಕಲ್ಲು ಎಸೆದುಕೊಂಡರೆಯೇ? 20 ಪೊಲೀಸರು ಗಾಯಗೊಂಡಿದ್ದ ಹೇಗೆ ಎಂದು ಕೇಳಿದ್ದಾರೆ.
ಮೀಸಲಾತಿ ಕೇಳುವುದಕ್ಕೆ, ಹೋರಾಟ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಎಲ್ಲರಿಗೂ ಒಂದೇ. ನನಗೂ ಒಂದೇ. ಸ್ವಾಮೀಜಿಗೂ ಒಂದೇ ಎಂದರು. ಇನ್ನು ಪಂಚಮಸಾಲಿ ಸಮಾಜದವರನ್ನು 2ಎಗೆ ಸೇರಿಸಲು ವಿರೋಧ ವ್ಯಕ್ತವಾಗಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಅಭಿಪ್ರಾತ ತಿಳಿಸಲು ಎಲ್ಲರಿಗೂ ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕರಣ ನಡೆದುಕೊಳ್ಳಲಾಗುತ್ತೆ ಅಂತಾ ಹೇಳಿದರು.
ಪಂಚಮಸಾಲಿ ಸಮಾಜದವರು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮುಂದೆ ಹೋಗಬೇಕು. ಬಿಜೆಪಿ ಕಾಲದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಜಯಪ್ರಕಾಶ್ ಹೆಗಡೆಯವರ ವರದಿಯಲ್ಲಿ ಈಗಿರುವಂತೆಯೇ ಪ್ರವರ್ಗ 2ಎ 2ಬಿ ಇರಬೇಕು. ಇದಕ್ಕೆ ಹೊಸ ಸೇರ್ಪಡೆಯಾಗಬಾರದು. 2ಬಿ ಯಲ್ಲಿರುವ 4% ಮೀಸಲಾತಿಯನ್ನು ರದ್ದು ಮಾಡಬಾರದು. ಬಿಜೆಪಿ ಅವಧಿಯಲ್ಲಿ ಆಗಿದ್ದಕ್ಕೆ ಅಂದು ಪ್ರತಿಭಟನೆ ಏಕಾಗಲಿಲ್ಲ? ಈಗ ಅದೇ ಬಿಜೆಪಿಯವರು ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಮುಸಲ್ಮಾನರಿಗೆ ಇದ್ದ ಶೇ.4 ರ ಮೀಸಲಾತಿಯನ್ನು ರದ್ದುಮಾಡಿ 3ಎ ಒಕ್ಕಲಿಗರಿಗೆ 2% ಮತ್ತು 3ಬಿ ಪ್ರವರ್ಗಗಳಿಗೆ ಲಿಂಗಾಯತರಿಗೆ 2% ಮೀಸಲಾತಿ ನೀಡಿದರು. ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಎಂಬ ವ್ಯಕ್ತಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರವೇ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿತ್ತು ಎಂದು ಹೇಳಿದರು. ಈ ವೇಳೆ ಸಚಿವ ಹೆ.ಚ್ಕೆ ಪಾಟೀಲ, ಸಿಂದಗಿ ಶಾಸಕ ಅಶೋಕ ಮನಗೂಳಿ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ, ಪ್ರಕಾಶ ರಾಠೋಡ ಸೇರಿ ಇತರರಿದ್ದರು.