ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಇಲ್ಲಿನ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 1,685 ಕೋಟಿ ರೂಪಾಯಿಯಲ್ಲಿ ಕಲಬುರಗಿಯನ್ನು ಸ್ಮಾರ್ಟ್(Smart City) ಸಿಟಿಯಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು. 15 ಪುಟಗಳ ಲಿಖಿತ ಭಾಷಣವನ್ನು ಓದಿ ಹಲವು ಕಾರ್ಯಯೋಜನೆಗಳ ಬಗ್ಗೆ ತಿಳಿಸಿದರು.
371(ಜೆ) ಅಡಿಯಲ್ಲಿ ಕೇಂದ್ರದಿಂದ ವಿಶೇಷ ಮೀಸಲಾತಿ ಕಲ್ಪಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ನಮ್ಮ ಸರ್ಕಾರ 5 ಸಾವಿರ ಕೋಟಿ ಅನುದಾನ ನೀಡುತ್ತಿದೆ. 262 ಕೋಟಿ ರೂಪಾಯಿಯಲ್ಲಿ ಸುಸಜ್ಜಿತವಾದ ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ಕಟ್ಟಡ ನಿರ್ಮಾಣ ಅಂತಿಮ ಹಂತದಲ್ಲಿದೆ. ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಅಗತ್ಯ ನೆರವು ನೀಡಿದ್ದೇವೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಅನುದಾನ ನೀಡಿದೆ. ಖಾಸಗಿ ಸಹಭಾಗಿತ್ವದಲ್ಲಿ ರಾಯಚೂರಿನಲ್ಲಿ 50 ಕೋಟಿ ರೂಪಾಯಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ ನಿರ್ಮಿಸಲಾಗುವುದು ಎಂದರು.