Ad imageAd image

ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ನಿಲುವು: ಸಿಎಂ ಸಿದ್ದರಾಮಯ್ಯ

ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿರುವುದರಿಂದ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ

Nagesh Talawar
ಕಸ್ತೂರಿ ರಂಗನ್ ವರದಿ ತಿರಸ್ಕರಿಸುವ ನಿಲುವು: ಸಿಎಂ ಸಿದ್ದರಾಮಯ್ಯ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕೊಡಗು(KOdagu): ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿರುವುದರಿಂದ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಪ್ರವಾಹ(Flood) ಪೀಡಿತ ಸ್ಥಳಗಳಿಗೆ ಭೇಟಿ ನೀಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕಸ್ತೂರಿ ರಂಗನ್(Kasturi rangan) ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ₹746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ ₹46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದರು.

ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ(Land slide) ಪ್ರದೇಶ ಸರಿ ಪಡಿಸಲು ಕಷ್ಟವಾಗುತ್ತಿದೆ. ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ.

16 ಜಾನುವಾರು ಮೃತಪಟ್ಟಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇವೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಜನರಿದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ. 28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2,708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ.‌ ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತದ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ.

ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುತ್ತೇನೆ. ಭೂ‌ಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್‌ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now
Share This Article