ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಡಾದಿಂದ 14 ಬದಲಿ ನಿವೇಶನಗಳನ್ನು ಪಡೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ವಾಪಸ್ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಬಹಿರಂಗ ಪತ್ರ ಬರೆದು ತಮ್ಮ ನಿರ್ಧಾರ ತಿಳಿಸಿದ್ದಾರೆ. ಜೊತೆಗೆ ಭಾವನಾತ್ಮಕವಾಗಿ ಕೆಲವಂದಿಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಬದಲಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಪ್ರಭಾವ ಬೀರಿ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಮೂರು ದೂರುಗಳು ದಾಖಲಾಗಿವೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ನನ್ನ ಪತ್ನಿಯ ನಿರ್ಧಾರವನ್ನು ಗೌರವಿಸುತ್ತೇನೆ ಎಂದಿದ್ದಾರೆ. ಮೂವರು ದೂರುದಾರರಲ್ಲಿ ಒಬ್ಬರಾದ ಸ್ನೇಹಮಯಿ ಕೃಷ್ಣ ಅವರು ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಜಯ ಎಂದಿದ್ದಾರೆ. ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು ಎನ್ನುವ ಮೂಲಕ ಸಿಎಂ ಪತ್ನಿಯ ನಿರ್ಧಾರವನ್ನು ಟೀಕಿಸಿದ್ದಾರೆ.
ಬಿ.ಎಂ ಪಾರ್ವತಿ ಅವರು ಬರೆದಿರುವ ಪತ್ರದ ಸಾರಾಂಶ ಹಾಗೂ ಮುಡಾಗೆ ಬರೆದ ಪತ್ರ ಇಲ್ಲಿದೆ: