ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಸೆಪ್ಟೆಂಬರ್ 27 ಶನಿವಾರ ನಟ ವಿಜಯ್ ನೇತೃತ್ವದ ತಮಿಳಿಗ ವೆಟ್ರಿ ಕಳಗಂ ಪಕ್ಷದ ರ್ಯಾಲಿಯ ವೇಳೆ ಮಹಾದುರಂತ ನಡೆದಿದೆ. ಕಾಲ್ತುಳಿತದಿಂದಾಗಿ ಬರೋಬ್ಬರಿ 41 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಬೇಡಿ ಎಂದು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಈ ಘಟನೆಯಿಂದ ನನ್ನ ಹೃದಯ ಭಾರವಾಗಿದೆ. ಮಾಹಿತಿ ಪಡೆದ ತಕ್ಷಣ ಜಿಲ್ಲಾಡಳಿತದೊಂದಿಗೆ ಮಾತನಾಡಿದ ಸಿದ್ಧತೆ ಮಾಡಿಕೊಂಡ ಬಳಿಕ ಚೆನ್ನೈನಲ್ಲಿ ಇರಲು ಆಗಲಿಲ್ಲ. ಕರೂರಿಗೆ ಆಗಮಿಸಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದ್ದೇನೆ. ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ, ವದಂತಿ ಹಬ್ಬಿಸಿರುವುದನ್ನು ನೋಡಿದ್ದೇನೆ. ಇದು ಬೇಸರದ ಸಂಗತಿಯಾಗಿದೆ. ದಯವಿಟ್ಟು ವದಂತಿ ಹಬ್ಬಿಸಬೇಡಿ ಎಂದಿದ್ದಾರೆ.
ಕಾಲ್ತುಳಿತ ಘಟನೆಯಲ್ಲಿ 17 ಮಹಿಳೆಯರು, 14 ಪುರುಷರ ಹಾಗೂ 9 ಮಕ್ಕಳು ಮೃತಪಟ್ಟಿದ್ದಾರೆ. 30 ಶವಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು 67 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಪಿ.ಸೆಂಥಿಲ್ ಮಾಹಿತಿ ನೀಡಿದ್ದಾರೆ.