ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಧರ್ಮಸ್ಥಳ ಪ್ರಕರಣದಲ್ಲಿ ರಾಜಕೀಯ ಲಾಭ ಸಿಗುತ್ತೆ ಎಂದುಕೊಂಡಿದ್ದರು. ಆದರೆ, ಸಿಗಲಿಲ್ಲ. ಧರ್ಮಸ್ಥಳ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೇವೆ. ಸುಳ್ಳು ಹೇಳುವುದಿಲ್ಲ. ಅಪಪ್ರಚಾರ ಮಾಡಲ್ಲ ಎನ್ನುವ ಮೂಲಕ ಬಿಜೆಪಿ ಧರ್ಮಸ್ಥಳ ಯಾತ್ರೆಯನ್ನು ಟೀಕಿಸಿದ್ದಾರೆ.
ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೆ ಏನೂ ಬರುವುದಿಲ್ಲ. ದಸರಾ ನಾಡ ಹಬ್ಬ. ಹಿಂದೂ, ಮುಸ್ಲಿಂ, ಕ್ರಿಶ್ಚಯನ್ ಎಲ್ಲರೂ ಸೇರಿ ಆಚರಣೆ ಮಾಡುತ್ತಾರೆ. ಬಾನು ಮುಷ್ತಾಕ್ ಉದ್ಘಾಟನೆ ಮಾಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.