Ad imageAd image

ಕರುಪ್ಪು ಸಿನಿಮಾ ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್ ಅನುಮತಿ

Nagesh Talawar
ಕರುಪ್ಪು ಸಿನಿಮಾ ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್ ಅನುಮತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಚೆನ್ನೈ(Chennai): ನಟ ಸೂರ್ಯ ಹಾಗೂ ನಟಿ ತ್ರಿಷಾ ಅಭಿನಯದ ಕರುಪ್ಪು ಚಿತ್ರದ ವಿಶೇಷ ಪ್ರದರ್ಶನಕ್ಕೆ ಮುಖ್ಯಮಂತ್ರಿ ವಿಜಯ್ ಜೋಸೆಫ್ ಅನುಮತಿ ನೀಡಿದ್ದಾರೆ. ಮೇ 14ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಮುಂಜಾನೆ 9 ಗಂಟೆಯ ವಿಶೇಷ ಪ್ರದರ್ಶನಕ್ಕೆ ಅನುಮತಿ ನೀಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಂಬಲಕ್ಕೆ ನಿಂತಿದ್ದಾರೆ.

ಸಿನಿಮಾ ನಿರ್ಮಾಣ ಸಂಸ್ಥೆ ಡ್ರೀಮ್ ವಾರಿಯರ್ ಪಿಕ್ಚರ್ಸ್ ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದೆ. ಮುಖ್ಯಮಂತ್ರಿ ವಿಜಯಗೆ ಧನ್ಯವಾದಗಳನ್ನು ತಿಳಿಸಿದೆ. ಆರ್.ಜೆ ಬಾಲಾಜಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬಾಬು, ಎಸ್.ಆರ್ ಪ್ರಭು ಅವರು ಡ್ರೀಮ್ ವಾರಿಯರ್ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಕನ್ನಡದಲ್ಲಿ ಕೆವಿಎನ್ ನಿರ್ಮಾಣ ಸಂಸ್ಥೆ ವಿತರಣೆ ಮಾಡಲಿದೆ.

WhatsApp Group Join Now
Telegram Group Join Now
Share This Article