ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಗುಣಮುಖರಾಗಿ ಬಂದಿರುವ ನಟ ಶಿವರಾಜಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಶಿವಣ್ಣನವರ ಮನೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು, ಆರೋಗ್ಯ ವಿಚಾರಿಸಿ ಮತ್ತೆ ಎಂದಿನಂತೆ ಕ್ರಿಯಾಶೀಲರಾಗಿರುವುದು ಖುಷಿ ನೀಡಿದೆ ಎಂದರು. ಈ ವೇಳೆ ಪತ್ನಿ ಗೀತಾ ಶಿವರಾಜಕುಮಾರ್ ಇದ್ದರು.
ಸುಮಾರು ಒಂದು ತಿಂಗಳ ಕಾಲ ಅಮೆರಿಕಾಗೆ ತೆರಳಿದ ಶಿವಣ್ಣ ಸಂಪೂರ್ಣ ಗುಣಮುಖರಾಗಿ ಭಾನುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಇನ್ನು ಒಂದೆರಡು ತಿಂಗಳು ಕಾಲ ಯಾವುದೇ ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸುವುದಿಲ್ಲ. ಅವರಿಗೆ ವಿಶ್ರಾಂತಿ ಬೇಕಿದ್ದು, ಆದಷ್ಟು ಬೇಗ ಎಂದಿನಂತೆ ಎನರ್ಜಿಯೊಂದಿಗೆ ವಾಪಸ್ ಬರುವುದಾಗಿ ಹೇಳಿದ್ದಾರೆ. ನಿನ್ನೆ ಫ್ಯಾನ್ಸ್ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.