Ad imageAd image

ಹೈಕಮಾಂಡ್ ಅನುಮತಿ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ: ಸಿಎಂ

Nagesh Talawar
ಹೈಕಮಾಂಡ್ ಅನುಮತಿ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ: ಸಿಎಂ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಹೈಕಮಾಂಡ್ ಅನುಮತಿ ಕೊಟ್ಟರೆ ಮತ್ತೆರಡು ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಸೂಚನೆ ಮೇರೆಗೆ ನಾವು ನಡೆಯುತ್ತೇವೆ. ಉಪ ಚುನಾವಣೆ ಫಲಿತಾಂಶಕ್ಕೂ ಸಿಎಂ ಕುರ್ಚಿಗೂ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ಫಲಿತಾಂಶ ಜನರು ಸರ್ಕಾರಕ್ಕೆ ಮಾಡುವ ಆಶೀರ್ವಾದ ಎಂದರು.

ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸೋಮವಾರದಿಂದ ನಾನು ಪ್ರಚಾರ ಮಾಡುತ್ತೇನೆ. ಈ ಹಿಂದೆ ನಡೆದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇವೆ. ಇದು ನಮ್ಮ ಮುಂದಿನ ಗೆಲುವಿಗೆ ದಿಕ್ಸೂಚಿಯಾಗಿದೆ. ಇನ್ನು ದಾವಣಗೆರೆಯಲ್ಲಿ ಯಾವುದೇ ಗೊಂದಲ ಇಲ್ಲ ಅಂತಾ ಹೇಳಿದರು.

WhatsApp Group Join Now
Telegram Group Join Now
Share This Article