ಪ್ರಜಾಸ್ತ್ರ ಸುದ್ದಿ
ಮಂಡ್ಯ(Manadaya): ನಾಳೆ ನಮ್ಮ ಅರ್ಜಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಇಡಿ ಅವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆಯ ಕೋಡಿಮಾರನಹಳ್ಳಿಯ ಲಕ್ಷ್ಮಿದೇವಿ ಸಮುದಾಯ ಭವನ ಉದ್ಘಾಟನೆಗೆ ಬಂದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ ಈ ರೀತಿ ಹೇಳಿದ್ದಾರೆ.