ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬೆಲೆ ಏರಿಕೆ ಖಂಡಿಸಿ ಕಳೆದ ಎರಡು ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಬಿಜೆಪಿ ಇಂದು ಸಿಎಂ ಸಿದ್ದರಾಮಯ್ಯನವರ ನಿವಾಸ ಮುತ್ತಿಗೆ ಹಾಕಲು ಯತ್ನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಅನೇಕ ನಾಯಕರು, ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕು. ಇಡೀ ರಾಜ್ಯದ ತುಂಬಾ ಪ್ರವಾಸ ಮಾಡುತ್ತೇವೆ. ಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಡವನ್ನು ಮುಂದುವರೆಸುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಏಪ್ರಿಲ್ 7ರಂದು ಜನಾಕ್ರೋಶ ಯಾತ್ರೆ ಆಯೋಜಿಸಲಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೈಸೂರಿನಲ್ಲಿ ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ವಿಜಯೇಂದ್ರ ಹೇಳಿದರು. ಏಪ್ರಿಲ್ 13ರಂದು 2ನೇ ಹಂತದ ಪ್ರತಿಭಟನೆಯನ್ನು ಶಿವಮೊಗ್ಗದಲ್ಲಿ ನಡೆಸುತ್ತೇವೆ ಎಂದರು.