Ad imageAd image

ಸಿಎಂ ಪತ್ನಿ ಮುಡಾ ಪ್ರಕರಣ: ಇಡಿ ತಕರಾರು ಅರ್ಜಿ

Nagesh Talawar
ಸಿಎಂ ಪತ್ನಿ ಮುಡಾ ಪ್ರಕರಣ: ಇಡಿ ತಕರಾರು ಅರ್ಜಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಅವರಿಗೆ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಇಡಿ ತಕರಾರು ಅರ್ಜಿಯನ್ನು ಸಲ್ಲಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬುಧವಾರ 8 ಪುಟಗಳ ತಕರಾರು ಅರ್ಜಿ ಸಲ್ಲಿಸಿದೆ. 14 ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಅನ್ನೋ ಆರೋಪವಿದೆ.

ಸಿಎಂ ಪತ್ನಿ ಬಿ.ಎಂ ಪಾರ್ವತಿ ಅವರಿಗೆ ನೀಡಲಾಗಿರುವ ನಿವೇಶನದಲ್ಲಿ ಅಕ್ರಮ ನಡೆದಿದೆ ಅನ್ನೋದಕ್ಕೆ ಸಾಕಷ್ಟು ಸಾಕ್ಷಿಗಳು ಸಿಕ್ಕಿವೆ. ಹೀಗಾಗಿ ಈ ಬಗ್ಗೆ ವಿಸ್ತೃತ ತನಿಖೆಯಾಗಬೇಕು. ಆದ್ದರಿಂದ ಲೋಕಾಯುಕ್ತ ವರದಿ ತಿರಸ್ಕರಿಸಬೇಕು ಎಂದು ಇಡಿ ತಕರಾರು ಅರ್ಜಿ ಸಲ್ಲಿಸಿದೆ.

WhatsApp Group Join Now
Telegram Group Join Now
Share This Article