ಪ್ರಜಾಸ್ತ್ರ ಸುದ್ದಿ
ವಿಜಯಪುರು(Bengaloru):(ಸಾಂದರ್ಭಿಕ ಚಿತ್ರ) ಗುಮ್ಮಟನಗರಿ ವಿಜಯಪುರ, ಬಿಸಿಲನಾಡು ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಶುಕ್ರವಾರ ಹಾಗೂ ಶನಿವಾರ ಉಷ್ಣಾಂಶ ಕನಿಷ್ಟಮಟ್ಟಕ್ಕೆ ಕುಸಿಯುವ ಸಾಧ್ಯತೆಯಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಶೀತಗಾಳಿ ಬೀಸಲಿದೆಯಂತೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಮುನ್ಸೂಚನೆ ನೀಡಿದೆ. ಇಂದು ವಿಜಯಪುರದಲ್ಲಿ ಕನಿಷ್ಠ 10 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಶನಿವಾರವೂ ಇದು ಮುಂದೆವರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.