ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಕಾಮಿಡಿ ಕಿಲಾಡಿ ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ(33) ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ರಾತ್ರಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಕುಸಿದು ಬಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲೇ ಅವರು ಮೃತಪಟ್ಟಿದ್ದರು ಎಂದು ಹೇಳಲಾಗಿದೆ. ಈ ಸುದ್ದಿ ತಿಳಿದು ಎಲ್ಲರಿಗೂ ಶಾಕ್ ಆಗಿದೆ. ಕಾಮಿಡಿ ಶೋಗಳ ಜೊತೆಗೆ ಧಾರವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಲು ಶುರು ಮಾಡಿದ್ದರು.
ನಟಿ ರಕ್ಷಿತಾ, ಸಹನಟ ಶಿವರಾಜ್ ಕೆ.ಆರ್ ಪೇಟೆ ಸೇರಿದಂತೆ ಅವರೊಂದಿಗೆ ನಟಿಸಿದ ಸಹ ಕಲಾವಿದರು, ಸ್ನೇಹಿತರು ಸೇರಿದಂತೆ ಎಲ್ಲರೂ ಸಂತಾಪ ಸೂಚಿಸಿದ್ದಾರೆ. ಎಷ್ಟೋ ಮನಸುಗಳ ನಗಿಸಿದ ಆತ್ಮಕ್ಕೆ ಹೇಗೆ ಶಾಂತಿ ಕೋರಲಿ ಎಂದು ಶಿವರಾಜ್ ಕೆ.ಆರ್ ಪೇಟೆ ತಮ್ಮ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಕನ್ನಡ ಚಿತ್ರರಂಗದವರು ಸಹ ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.