ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಕುಟುಂಬಸ್ಥರಿಗೆ ಸೇರಿದ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಕೆಐಎಡಿಬಿಯಿಂದ(KIDB) ಐದು ಎಕರೆ ಜಾಗ ಪಡೆದುಕೊಳ್ಳುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ ಈ ಸಂಬಂಧ ರಾಜ್ಯಪಾಲರ ದೂರು ನೀಡಿದ್ದು ಸಚಿವ ಖರ್ಗೆ ವಜಾಗೊಳಿಸುವಂತೆ ಆಗ್ರಹಿಸಲಾಗಿದೆ.
ಮಂಗಳವಾರ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ದೂರು ಸಲ್ಲಿಸಿದ್ದಾರೆ. ಈ ವಿಚಾರ ಈಗ ರಾಜ್ಯ ಮಾತ್ರವಲ್ಲ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಚರ್ಚೆಯನ್ನು ಹುಟ್ಟು ಹಾಕಿದೆ. ಒಟ್ಟಿನಲ್ಲಿ ಒಂದಾದ ಮೇಲೆ ಒಂದರಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ಅಧಿಕಾರ ದುರುಪಯೋಗದ ಆರೋಪಗಳು ಕೇಳಿ ಬರುತ್ತಿವೆ.