Ad imageAd image

ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ

Nagesh Talawar
ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕಲಬುರಗಿ(Kalaburagi): ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿರುವ ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿ ಹೈಕೋರ್ಟ್ ಪೀಠ ಅನುಮತಿ ನೀಡಿದೆ. ಆದರೆ, ಷರತ್ತು ವಿಧಿಸಿದೆ. ನವೆಂಬರ್ 16 ಭಾನುವಾರ ಮಧ್ಯಾಹ್ನ 3 ಗಂಟೆಯಿಂದ 5.30ರ ತನಕ ಪಥಸಂಚನಲ ನಡೆಸಬಹುದಾಗಿದೆ.

ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅನುಮತಿ ನೀಡಿ ಅರ್ಜಿಯನ್ನು ಇತ್ಯರ್ಥಗೊಳಿಸಿದೆ. ಅಕ್ಟೋಬರ್ 19ರಂದು ಪಥಸಂಚಲನ ನಡೆಸಲು ಆರ್ ಎಸ್ಎಸ್ ಅನುಮತಿ ಕೇಳಿತ್ತು. ಅದೇ ದಿನ ಇನ್ನೆರಡು ಸಂಘಟನೆಗಳು ಅನುಮತಿ ಕೇಳಿದ್ದವು. ಹೀಗಾಗಿ ತಹಶೀಲ್ದಾರ್ ನಿರಾಕರಿಸಿದ್ದರು. ಇದರಿಂದಾಗಿ ಆರ್ ಎಸ್ಎಸ್ ಜಿಲ್ಲಾ ಸಂಘಸಂಚಾಲಕ ಅಶೋಕ ಪಾಟೀಲ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರದಲ್ಲಿ ಐಟಿಬಿಟಿ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದರು.

WhatsApp Group Join Now
Telegram Group Join Now
Share This Article