ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ ರಾಯ್ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿರುವ ಫ್ಲ್ಯಾಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೇಂದ್ರ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಶುಕ್ರವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪದೆಪದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುತ್ತಿದ್ದರಂತೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆಯೂ ತನಿಖೆ ನಡೆದಿದೆ.




