Ad imageAd image

ಬೆಳ್ತಂಗಡಿ: ಗ್ರಾ.ಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಗೆಲುವು

Nagesh Talawar
ಬೆಳ್ತಂಗಡಿ: ಗ್ರಾ.ಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಗೆಲುವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳ್ತಂಗಡಿ(Beltangadi): ತಾಲೂಕಿನ ಹೊಸಂಗಡಿ ಗ್ರಾಮ ಪಂಚಾಯ್ತಿ ಹಾಗೂ ಪುದುವೆಟ್ಟು ಗ್ರಾಮ ಪಂಚಾಯ್ತಿಯ ಒಂದೊಂದು ಸ್ಥಾನಗಳಿಗೆ ಬುಧವಾರ ಉಪ ಚುನಾವಣೆ ನಡೆದಿದೆ. ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿ ಗೆಲುವು ಸಾಧಿಸಿದೆ. ಹೊಸಂಗಡಿ ಗ್ರಾಮ ಪಂಚಾಯ್ತಿಯ 3ನೇ ವಾರ್ಡ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಆನಂದ ಬಂಗೇರ 457 ಮತಗಳನ್ನು ಪಡೆದಿದ್ದು, ಬಿಜೆಪಿ ಬೆಂಬಲಿತ ಸುನೀಲ್ ಶೆಟ್ಟಿ 274 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಇನ್ನು ಪುದುವೆಟ್ಟು ಗ್ರಾಮ ಪಂಚಾಯ್ತಿಯ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಜಯಲಕ್ಷ್ಮಿ 372 ಮತಗಳನ್ನು ಪಡೆದು ಜಯ ಸಾಧಿಸಿದ್ದಾರೆ. ಕಾಂಗ್ರೆಸ್ಸಿನ ಸಿಂಧೂಗೆ 120 ಮತಗಳು ಬಿದ್ದಿವೆ. ಹೀಗಾಗಿ ತಾಲೂಕಿನ ಎರಡು ಗ್ರಾಮ ಪಂಚಾಯ್ತಿಗಳ ತಲಾ 1 ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಸಮಬಲ ಸಾಧಿಸಿವೆ.

WhatsApp Group Join Now
Telegram Group Join Now
Share This Article